ಸಿಸಿಬಿ ಕಾರ್ಯಾಚರಣೆ: ₹1.5 ಕೋಟಿಯ ಡ್ರಗ್ಸ್ ಜಪ್ತಿ, ವಿದೇಶಿಗರು ಸೇರಿ 9 ಮಂದಿ ಬಂಧನ

ಸಿಸಿಬಿ ಕಾರ್ಯಾಚರಣೆ: ₹1.5 ಕೋಟಿಯ ಡ್ರಗ್ಸ್ ಜಪ್ತಿ, ವಿದೇಶಿಗರು ಸೇರಿ 9 ಮಂದಿ ಬಂಧನ
By Published : September 9, 2025 at 2:59 PM IST

ಬೆಂಗಳೂರು: ಮಾದಕ ವಸ್ತುಗಳ ಸರಬರಾಜುಗಾರರ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಕಳೆದ 2 ವಾರದ ಅವಧಿಯಲ್ಲಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಚರಣೆ ಕೈಗೊಂಡು ಇಬ್ಬರು ವಿದೇಶಿ ಪ್ರಜೆಗಳ ಸಹಿತ 9 ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯ ಮೂಲಕ 506 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 50 ಎಲ್‌ಎಸ್‌ಡಿ ಸ್ಟ್ರಿಪ್ಸ್, 85 ಗ್ರಾಂ ಕೊಕೇನ್, 56 ಗ್ರಾಂ ಹೈಡ್ರೋಗಾಂಜಾ ಸೇರಿದಂತೆ 1.5 ಕೋಟಿ ರೂ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಎಸ್.ಲೇಔಟ್, ಅವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೋಲೇಔಟ್ ಹಾಗೂ ರಾಮಮೂರ್ತಿನಗರ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿಯ ಮಾದಕ ಪದಾರ್ಥ ನಿಗ್ರಹ ದಳದ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯ ಲಾಡ್ಜ್‌ವೊಂದರಲ್ಲಿ ಮಾದಕ ಪದಾರ್ಥಗಳ ಸೇವನೆ ಹಾಗೂ ಮಾರಾಟಕ್ಕೆ ಅವಕಾಶ ನೀಡುತ್ತಿರುವುದು ಕಂಡುಬಂದಿದೆ. ಡ್ರಗ್ ಪೆಡ್ಲರ್‌ಗಳೊಂದಿಗೆ ಲಾಡ್ಜ್ ಸಿಬ್ಬಂದಿ ಸಂಪರ್ಕ ಹೊಂದಿರುವುದು ತಿಳಿದು ಬಂದಿದ್ದು, ಸದ್ಯ ಲಾಡ್ಜ್‌ ಸೀಜ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

BENGALURU CCB OPERATION FOREIGNERS ARREST ಬೆಂಗಳೂರಲ್ಲಿ ಡ್ರಗ್ಸ್ ಜಪ್ತಿ DRUGS SEIZED

ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದು ಡ್ರಗ್ಸ್ ದಂಧೆ: ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದು ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ನೈಜೀರಿಯನ್ ಪ್ರಜೆಯನ್ನು ಬಾಗಲೂರು ಠಾಣೆ ಪೊಲೀಸರು ಕಳೆದ ವಾರದ ಬಂಧಿಸಿದ್ದಾರೆ. ಆರೋಪಿ ಚಿಕೋಜಿ ಹೇಡಾಹಾ ಎಂಬಾತನಿಂದ 2.30 ಕೋಟಿ ರೂ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಬಾಗಲೂರಿನ ಸಂತೆ ಸರ್ಕಲ್ - ಸಿಎಂಆರ್ ಕಾಲೇಜ್ ನಡುವಿನ ಮಾರ್ಗದಲ್ಲಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದಾಗ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

₹5 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ಸ್ ವಶಕ್ಕೆ: ಆಗಸ್ಟ್ ತಿಂಗಳಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿ ವೀಸಾದಡಿ ಮಾದಕ ಪದಾರ್ಥ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಬಂಧಿಸಿದ್ದರು. ಆಫ್ರಿಕಾ ಮೂಲದ ಜೋಯಲ್ ಕಾಬೊಂಗ್ ಹಾಗೂ ಆತನ ಸ್ನೇಹಿತೆ ಜೋಯ್ ಸಂಡೆ ಎಂಬಾಕೆಯನ್ನು ಬಂಧಿಸಿ 5 ಕೋಟಿ ರೂ ಮೌಲ್ಯದ 2 ಕೆಜಿ 150 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ಸ್ ವಶಕ್ಕೆ ಪಡೆದಿದ್ದರು.

📚 Related News