'ಕೌಸಲ್ಯ ಸುಪ್ರಜಾ ರಾಮ‌' ಬಳಿಕ 'ಬ್ರ್ಯಾಟ್'​ ಮೂಲಕ ಮೋಡಿ ಮಾಡಲು ಸಜ್ಜಾದ ಶಶಾಂಕ್-ಡಾರ್ಲಿಂಗ್ ಕೃಷ್ಣ

'ಕೌಸಲ್ಯ ಸುಪ್ರಜಾ ರಾಮ‌' ಬಳಿಕ 'ಬ್ರ್ಯಾಟ್'​ ಮೂಲಕ ಮೋಡಿ ಮಾಡಲು ಸಜ್ಜಾದ ಶಶಾಂಕ್-ಡಾರ್ಲಿಂಗ್ ಕೃಷ್ಣ
By Published : October 28, 2025 at 5:38 PM IST

'ಕೌಸಲ್ಯ ಸುಪ್ರಜಾ ರಾಮ' ಚಿತ್ರದ ನಂತರ ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್​ನಲ್ಲಿ ಮೂಡಿಬರುತ್ತಿರುವ ಚಿತ್ರ 'ಬ್ರ್ಯಾಟ್'. ಟ್ರೇಲರ್​ ಹಾಗೂ ಹಾಡುಗಳಿಂದಲೇ ಸಿನಿಪ್ರಿಯರಲ್ಲಿ ಕುತೂಹಲ ಹುಟ್ಟಿಸಿರುವ ಚಿತ್ರ ಈ ವಾರ ಪ್ರೇಕ್ಷಕರೆದುರು ಬರಲಿದೆ. ಈಗಾಗಲೇ ಕಿಚ್ಚ ಸುದೀಪ್ ಈ ಚಿತ್ರದ ಟ್ರೇಲರ್ ಲಾಂಚ್ ಮಾಡಿ ಸಾಥ್​ ಕೊಟ್ಟಿದ್ದಾರೆ. ಜೊತೆಗೆ ನಿರ್ದೇಶಕ ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ಹಿಟ್ ಸಿನಿಮಾವನ್ನು ಸ್ಯಾಂಡಲ್​ವುಡ್​ಗೆ ಕೊಟ್ಟಿದೆ. ಡಾರ್ಲಿಂಗ್ ಕೃಷ್ಣ ಅವರನ್ನು ಈ ಸಿನಿಮಾದಲ್ಲಿ ಮಾಸ್ ಲುಕ್​​ನಲ್ಲಿ ತೋರಿಸುತ್ತಿದ್ದು, ಬಹಳ ಚೆನ್ನಾಗಿ ಮೂಡಿ ಬಂದಿದೆ ಎಂದು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಮನಿಶಾ ಕಂದಕೂರ್ ನಟಿಸಿದ್ದಾರೆ. ಉಳಿದಂತೆ, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಸೇರಿದಂತೆ ಮೊದಲಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಫಸ್ಟ್ ರ್ಯಾಂಕ್ ರಾಜು ಚಿತ್ರದ ನಂತರ ಮಂಜುನಾಥ್ ವಿ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣ, ಗಿರಿ ಮಹೇಶ್ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ "ಬ್ರ್ಯಾಟ್" ಚಿತ್ರಕ್ಕಿದೆ. ಯಶಸ್ವಿ ಕೌಸಲ್ಯ ಸುಪ್ರಜಾ ರಾಮ ಚಿತ್ರದ ನಂತರ ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್​ನಲ್ಲಿ ಮೂಡಿ ಬಂದಿರುವ "ಬ್ರ್ಯಾಟ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಜನರ ಮನ ಗೆದ್ದಿದೆ. ಟೀಸರ್ ಹಾಗೂ ಟ್ರೇಲರ್​ಗೂ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಿಸಿದೆ. ಈಗಾಗಲೇ ಕೃಷ್ಣ ಅವರ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದು, ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರದಲ್ಲಿದ್ದಾರೆ. ಅಕ್ಟೋಬರ್ 31ಕ್ಕೆ ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ.

📚 Related News